Pakistan : ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇಮ್ರಾನ್ ಖಾನ್..

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ತೆಹ್ರೀಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಹಾಗೂ ಪಾಕ್ ತಂಡದ ಮಾಜಿ ಕ್ರಿಕೆಟರ್ ಇಮ್ರಾನ್ ಖಾನ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಾಕ್ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಇಮ್ರಾನ್ ಖಾನ್ 22ನೇ ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕಾಮೆಂಟೇಟರ್ ಹಾಗೂ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಈ ಸಂದರ್ಭದಲ್ಲಿ ಹಾಜರಿದ್ದರು.

ಕಳೆದ ತಿಂಗಳು ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್ ಎ ಇನ್ಸಾಫ್ ಸೀಟುಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 1996 ರಲ್ಲಿ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದ ಇಮ್ರಾನ್ ಖಾನ್ ಸತತ 22 ವರ್ಷಗಳ ರಾಜಕೀಯ ಸಂಘರ್ಷದ ನಂತರ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com