ಕೇರಳ ಪ್ರವಾಹ : ವೈಮಾನಿಕ ಸಮೀಕ್ಷೆ ನಡೆಸಿದ PM : 500 ಕೋಟಿ ಪರಿಹಾರ ಘೋಷಣೆ

ಭಾರೀ ಮಳೆಯಿಂದಾಗಿ ಉಂಟಾಗಿರುವ ಭೀಕರ ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿದ್ದಾರೆ. ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ಕೇರಳದ ರಾಜಧಾನಿ ಕೊಚ್ಚಿಯ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿರುವ ನರೇಂದ್ರ ಮೋದಿ 500 ಕೋಟಿ ರೂ ಪರಿಹಾರವನ್ನು ಘೋಷಿಸಿದ್ದಾರೆ. ಭೀಕರ ಪ್ರವಾಹದಿಂದಾಗಿ ಕೇರಳದಲ್ಲಿ ಇದುವರೆಗೆ 200ಕ್ಕೂ ಹೆಚ್ಚು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

‘ ರಾಜ್ಯದಲ್ಲಿ ಅಪಾರ ಹಾನಿಯುಂಟಾಗಿದ್ದು, ಪ್ರಧಾನಿಯವರಿಂದ 2,500 ಕೋಟಿ ಪರಿಹಾರವನ್ನು ನಿರೀಕ್ಷಿಸಿದ್ದೆವು ‘ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ ಪರಿಹಾರವನ್ನು ಘೋಷಿಸಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com