ಕೊಪ್ಪಳ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ ನದಿ : ಬಿರುಕು ಬಿಟ್ಟ ಸೇತುವೆ

ಕೊಪ್ಪಳ : ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯಲ್ಲಿ ಬಿರುಕು ಬಿಟ್ಟಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿ ಹೊಸದಾಗಿ ನಿರ್ಮಿಸಿದ್ದ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಕಡೇಬಾಗಿಲಿನಿಂದ ಹಂಪೆಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಸತತವಾಗಿ 2 ಲಕ್ಷಕ್ಕಿಂತ ಹೆಚ್ಚು ಕ್ಯೂಸೇಕ್ ನೀರು ಬಿಟ್ಟಿದ್ದರಿಂದ ಬಿರುಕು ಬಿಟ್ಟಿದೆ. ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದ್ದು, ಕಳಪೆ ಕಾಮಗಾರಿಯಿಂದ ಬಿರುಕು ಬಿಟ್ಟಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಒಂದು ವರ್ಷದ ಹಿಂದೆಯಷ್ಟೇ ಈ ಸೇತುವೆ ಲೋಕಾರ್ಪಣೆಯಾಗಿತ್ತು. ಬೇರೆ ಸೇತುವೆಗಳು ಬಂದ್ ಆಗಿರುವುದರಿಂದ ಇದೇ ಸೇತುವೆಯನ್ನು ಮಾತ್ರವೇ ಪ್ರಯಾಣಿಕರು ನೆಚ್ಚಿಕೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com