ಹಾರಂಗಿ ಅಣೆಕಟ್ಟು ಬಿರುಕು, ಕೊಡಗು ಭೂಕಂಪ ಎಂಬ ಬಗ್ಗೆ ಸಿಎಂ ಹೇಳಿದ್ದೇನು…?

ಮಡಿಕೇರಿ : ಸತತ ಮಳೆಯಿಂದ ತತ್ತರಿಸಿರುವ  ಕೊಡಗಿನಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಹಾರಂಗಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂಬ ಸುಳ್ಳು ಸುದ್ದಿಯೊಂದು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

 

ಹಾರಂಗಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂಬ ಸುದ್ದಿ ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವೀಟರ್​ ಸ್ಪಷ್ಟನೆ ನೀಡಿದ್ದಾರೆ,  ಸಿಎಂ ಟ್ವೀಟ್​,  ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.

ಕಿಡಿಗೇಡಿಗಳು ಹಬ್ಬಿಸಿರುವ ಈ ಸುಳ್ಳು ಸುದ್ದಿಯ ಬಗ್ಗೆ ಕಾವೇರಿ ನೀರಾವರಿ ನಿಗಮ ನಿಯಮಿತ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಆರ್ ಕೆ ರಾಜೇಗೌಡ ಅವರು ಸ್ಪಷ್ಟನೆ ನೀಡಿದ್ದು, ಇಂಥ ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದಿದ್ದಾರೆ. ಇನ್ನ ಕೊಡಗಿನಲ್ಲಿ ಯಾವುದೇ ರೀತಿಯಲ್ಲಿ ಭೂಕಂಪವಾಗಿಲ್ಲ ಭಯ ಪಡುವ ಅಗತ್ಯವಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಮಳೆ ಸಂತ್ರಸ್ತ ಕೊಡಗು ಜನತೆಗೆ ನೆರವು ಎಲ್ಲೆಡೆಯಿಂದ ಹರಿದು ಬರುತ್ತಿದೆ.  ಭಾರತೀಯ ಸೇನೆ, ವಿಪತ್ತು ನಿರ್ವಹಣಾ ದಳ, ಆರೆಸ್ಸೆಸ್,  ಸ್ವಯಂ ಸೇವಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಸಂತೃಸ್ತರ ನೆರವಿಗೆ ಧಾವಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೆರೆ ಪರಿಹಾರ ಕಾರ್ಯವನ್ನು ಗಮನಿಸುತ್ತಿದ್ದಾರೆ. ಈ ನಡುವೆ ಆತಂಕ ಸೃಷ್ಟಿಸುವ ಇಂಥ ಸುದ್ದಿಗಳನ್ನು ನಂಬಬೇಡಿ ಎಂದು ಸಾರ್ವಜನಿಕರು ಕೂಡಾ ಮನವಿ ಮಾಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com