ದೇವರನಾಡಲ್ಲಿ ಮುಂದುವರೆದ ಮಳೆ : ಕೇರಳಕ್ಕೆ KSRTC ಬಸ್​ ಸಂಚಾರ ಆರಂಭ…!

ಕೇರಳ : ಕೇರಳದಲ್ಲಿ ಇನ್ನೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿ ಮೃಂತ್ಯಜಯ್ ತಿಳಿಸಿದ್ದಾರೆ. ಕೇರಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕೆಎಸ್‍ಆರ್​ ಟಿಸಿ  ಬಸ್ ಸಂಚಾರ ಮತ್ತೆ ಆರಂಭವಾಗಿದೆ.

Image result for kerala

ಹವಾಮಾನ ಇಲಾಖೆ ಕೇರಳದ 14 ಜಿಲ್ಲೆಗಳಲ್ಲಿ ಘೋಷಿಸಿದ್ದ ‘ರೆಡ್ ಅಲರ್ಟ್’ ಹಿಂದಕ್ಕೆ ಪಡೆದುಕೊಂಡಿದ್ದು, ಕೇರಳಿಗರು ಕೊಂಚ ನಿರಾಳರಾಗುವಂತೆ ಮಾಡಿದೆ. ಕಳೆದ ಎರಡು ವಾರಗಳಿಂದ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದ್ರೆ ಮುಂದಿನ ಐದು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ನದಿಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಸಾಮಾನ್ಯವಾಗಿ ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳನ್ನು ಹೊರತು ಪಡಿಸಿ ಎಲ್ಲ ಕಡೆಯೂ ಸಾಧಾರಣ ಮಳೆಯಾಗಲಿದೆ.

ಕಾಂಗ್ರೆಸ್ ನ ಎಲ್ಲ ಸಂಸದರು ಮತ್ತು ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಪರಿಹಾರ ನಿಧಿಗೆ ನೀಡಿದ್ದಾರೆ. ಇತ್ತ ಶಿವಸೇನೆ ಪಕ್ಷದ ಎಲ್ಲ ಸಂಸದರು ಮತ್ತು ಶಾಸಕರು ಸಹ ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ. ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ 500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com