ಕೊಡಗಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ ಪಿಎಂ ಮೋದಿ..!

ಕೊಡಗು :  ಭಾರೀ ಮಳೆಯಿಂದ ಪ್ರವಾಸಕ್ಕೆ ತುತ್ತಾಗಿರುವ ಜನರನ್ನು ಭೇಟಿ ಮಾಡಿ ಅವರ ಕಷ್ಟವನ್ನು ಅಲಿಸಿ ಚೆಕ್​ ವಿತರಿಸಿದ್ದಾರೆ,  ಇನ್ನ ಕೊಡಗಿನ ಜನತೆಗೆ ಕುಡಿಯುವ ನೀರು ಕೂಡ ಸಿಗದೇ ಒದ್ದಾಡುತ್ತಿರುವ ಸಂತೃಸ್ತರಿಗೆ ಹಲವೆಡೆಯಿಂದ  ಜನರಿಗೆ ಒಟ್ಟೆ, ಊಟಗಳ ಮಹಾಪೂರವೇ ಹರಿದಿಬಂದಿದೆ. ಇನ್ನ ಕೊಡಗಿನ ಜನತೆಯ ಬಗ್ಗೆ ಪ್ರಧಾನಿ ಮಾಹಿತಿ ಪಡೆದಿದ್ದಾರೆ.

ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆಗೆ ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದು, ಫೋನ್​ ಮಾಡಿ ಮಾಹಿತಿ ಮಾಡಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ನಲ್ಲಿ, ಮುಖ್ಯಮಂತ್ರಿ ಕುಮಾರಸ್ವಾಮಿ ಜೀ, ರಾಜ್ಯದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಲ್ಲಿಗೆ ಬೇಕಾಗುವ ಎಲ್ಲಾ ನೆರವು ಹಾಗೂ ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ನೆರವನ್ನು ಕೇಂದ್ರ ಸರ್ಕಾರ ಪೂರೈಸಲಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಚರಣೆ ನಡೆಸಿ ಎಂದು ಬರೆದುಕೊಂಡಿದ್ದಾರೆ.

ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆಯು ಅಕ್ಷರಶಃ ನಲುಗಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ ಎಂದು ತಿಳಿದಿದ್ದು, ರಾಜ್ಯಕ್ಕೆ ಬೇಕಾಗುವ ಅಗತ್ಯ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಮೋದಿಯವರು ಖುದ್ದು ಸಿಎಂ ಕುಮಾರಸ್ವಾಮಿಯವರಿಗೆ ಕರೆ ಮಾಡಿ, ಕೊಡಗು ಜಿಲ್ಲೆಯ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

Leave a Reply

Your email address will not be published.

Social Media Auto Publish Powered By : XYZScripts.com