ಸಂತ್ರಸ್ತರಿಗೆ ಬಿಸ್ಕೆಟ್​ ಎಸೆದು ಸಚಿವರ ಎಡವಟ್ಟು : ತಪ್ಪಾಗಿದೆ ಕ್ಷಮಿಸಿ ಬಿಡಿ ಎಂದ ರೇವಣ್ಣ….!

ಬೆಂಗಳೂರು : ಮಹಾಮಳೆಗೆ ನಲುಗಿದ ಕೊಡಗು ಸಂತ್ರಸ್ತರಿಗೆ  ಬಿಸ್ಕೆಟ್ ಪ್ಯಾಕೆಟ್ ಗಳನ್ನು ಎಸೆದು ತೀವ್ರ ಟೀಕೆಗೆ ಗುರಿಯಾಗಿರುವ ಸಚಿವ ರೇವಣ್ಣ ಅವರು  ಕ್ಷಮೆ ಕೇಳಿದ್ದು,  ಒಳ್ಳೆ ಕೆಲಸ ಮಾಡುವಾಗ ಇದೆಲ್ಲಾ ಸಾಮಾನ್ಯ. ನಾನು ಉದ್ದೇಶಪೂರ್ವಕವಾಗಿ ಬಿಸ್ಕೆಟ್​ ಎಸೆದಿಲ್ಲ,  ಜನತೆ ಕ್ಷಮೆ ಕೇಳಬೇಕು ಅಂದ್ರೆ ಕೇಳ್ತೀನಿ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರೇವಣ್ಣ,  ಹಸಿವಿನಿಂದ ಮಕ್ಕಳು ಹಾಗೂ ಮಹಿಳೆಯರು ಬಿಸ್ಕೆಟ್ ಕೇಳುತ್ತಿದ್ದರು. ಹೀಗಾಗಿ ದೂರದಲ್ಲಿ ಕುಳಿತವರಿಗೆ ಬಿಸ್ಕೆಟ್ ಎಸೆದಿರುವೆ. ಈ ಕುರಿತಾಗಿ ಜನತೆ ಕ್ಷಮೆ ಕೇಳಬೇಕು ಎಂದರೆ ಕೇಳುತ್ತೇನೆ
ನಾನು ದೇವರನ್ನು ನಂಬುವ ವ್ಯಕ್ತಿ. ಬೇಕು ಅಂತ ಬಿಸ್ಕೆಟ್ ಎಸೆದಿಲ್ಲ. ಆ ರೀತಿಯ ಮನೋಭಾವನೆಯೂ ನನ್ನಲ್ಲಿ ಇಲ್ಲ. ಈ ಸುದ್ದಿಯನ್ನು ಮಾರನೇ ದಿನ ತೊರಿಸಲಾಗಿದೆ.  ನನ್ನಿಂದ ತಪ್ಪಾಗಿದೆ ಬಿಡಿ ಎಂದು ಹೇಳಿ ಮೆಲ್ಲಗೆ ಜಾರಿಕೊಂಡರು.

Leave a Reply

Your email address will not be published.

Social Media Auto Publish Powered By : XYZScripts.com