ಬೀದರ್ : ಸಂವಿಧಾನ ಸುಟ್ಟು ಹಾಕಿದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ..!

ಬೀದರ್ : ದೆಹಲಿಯ‌ ಜಂತರ ಮಂತರನಲ್ಲಿ ಕಿಡಗೇಡಿಗಳು ಸಂವಿಧಾನ ಪ್ರತಿ ಸುಟ್ಟು ಹಾಕಿರುವ ಹಿನ್ನೆಲೆಯಲ್ಲಿ ಸಂವಿಧಾನ ಸುಟ್ಟಿರುವ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬೀದರ್ ನಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಮತ್ತು ಅನಂತಕುಮಾರ್ ಹೆಗಡೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಮೂಲಕ ದಲಿತ ಸಂಘಟನೆಗಳ ಒಕ್ಕೂಟ ಕಿಡಿಗೆಡಿಗಳನ್ನು ಬಂಧಿಸಲು ಒತ್ತಾಯ ಪಡಿಸಿದ್ದಾರೆ.

ಸಂವಿಧಾನದ ಪ್ರತಿ ಸುಟ್ಟು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರಿಗೆ ಅವಮಾನ ಮಾಡಲಾಗಿದೆ. ಕೃತ್ಯಕ್ಕೆ ಕಾರಣರಾದವರ ವಿರುದ್ದ ಕ್ರೀಮಿನಲ್ ಕೇಸ್ ದಾಖಲಿಸಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published.