Cricket : ಬ್ರಾಡ್ಮನ್ ಹಾಗೂ ಪಾಂಟಿಂಗ್ ಹಿಂದಿಕ್ಕಿದ ಕೊಹ್ಲಿ..! : ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ವಿಕ್ರಮ

ಟ್ರೆಂಟ್ ಬ್ರಿಡ್ಜ್ ಅಂಗಳದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧ 203 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯನ್ ಕ್ರಿಕೆಟ್ ನ ದಂತಕಥೆ ಸರ್ ಡಾನ್ ಬ್ರಾಡ್ಮನ್ ಹಾಗೂ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.

ತಾನು ನಾಯಕನಾಗಿರುವ ತಂಡ ಗೆಲುವು ಸಾಧಿಸಿದ ಟೆಸ್ಟ್ ಪಂದ್ಯಗಳಲ್ಲಿ, ಅತಿ ಹೆಚ್ಚು ಬಾರಿ ಇನ್ನೂರಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಟೀಮ್ ಇಂಡಿಯಾ ಗೆಲುವು ಸಾಧಿಸಿದ 7 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 200 ಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆ ನಿರ್ಮಿಸಿದ್ದಾರೆ.

ಆಸ್ಟ್ರೇಲಿಯಾ ಗೆಲುವು ಸಾಧಿಸಿದ ಟೆಸ್ಟ್ ಪಂದ್ಯಗಳಲ್ಲಿ ಸರ್ ಡಾನ್ ಬ್ರಾಡ್ಮನ್ ಹಾಗೂ ರಿಕಿ ಪಾಂಟಿಂಗ್ 6 ಸಲ 200ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com