Cricket : ಸೌರವ್ ಗಂಗೂಲಿ ಹಿಂದಿಕ್ಕಿದ ಕೊಹ್ಲಿ : ನಾಯಕನಾಗಿ 22 ಟೆಸ್ಟ್ ಜಯಗಳ ದಾಖಲೆ

ಟ್ರೆಂಟ್ ಬ್ರಿಡ್ಜ್ ಅಂಗಳದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಭಾರತ 203 ರನ್ ಅಂತರದಿಂದ ಅಮೋಘ ಜಯ ದಾಖಲಿಸಿತು. ಭಾರತದ ನಾಯಕನಾಗಿ ವಿರಾಟ್ ಕೊಹ್ಲಿ ಪಾಲಿಗೆ 22ನೇ ಟೆಸ್ಟ್ ಜಯವಾಗಿದೆ.

ಈ ಮೂಲಕ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿದ್ದಾರೆ. ನಾಯಕನಾಗಿ 22 ಟೆಸ್ಟ್ ಜಯ ಗಳಿಸುವಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಅತಿ ಹೆಚ್ಚು ಟೆಸ್ಟ್ ಜಯದ ಸಂದರ್ಭದಲ್ಲಿ ತಂಡದ ಮುಂದಾಳತ್ವ ವಹಿಸಿದವರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ 21 ಟೆಸ್ಟ್ ಗಳಲ್ಲಿ ಜಯಿಸಿತ್ತು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮಹೇಂದ್ರ ಸಿಂಗ್ ಧೋನಿ 27 ಟೆಸ್ಟ್ ಗೆಲುವುಗಳಲ್ಲಿ ಟೀಮ್ ಇಂಡಿಯಾ ನೇತೃತ್ವ ವಹಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com