ಪಶ್ಚಿಮ ಬಂಗಾಳ : TMC ಕಚೇರಿಯಲ್ಲಿ ಬಾಂಬ್ ಸ್ಫೋಟ : ಇಬ್ಬರ ಸಾವು, ಮೂವರಿಗೆ ಗಾಯ

ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗುರುವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಟಿಎಂಸಿ ಕಾರ್ಯಕರ್ತರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿಡ್ನಾಪುರ ಜಿಲ್ಲೆಯ ಮಕರಾಮಪುರ ಎಂಬ ಹಳ್ಳಿಯ ನಾರಾಯಣಗಢ ತೆಹಸೀಲ್ ನಲ್ಲಿರುವ ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಬಾಂಬ್ ಸ್ಫೋಟ ಸಂಭವಿಸಿದೆ.

Image result for tmc office bomb blast midnapur

ಗಾಯಗೊಂಡಿರುವವರನ್ನು ಮಿಡ್ನಾಪುರ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಲಾಗಿದೆ. ಗಾಯಗೊಂಡಿರುವ ಮೂರು ಜನರ ಪೈಕಿ ಒಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ನೇತೃತ್ವದ ಟಿಎಂಸಿ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಪಕ್ಷದ ಸಭೆ ನಡೆಯುವದರಲ್ಲಿತ್ತು. ಪಕ್ಷದ ಕಾರ್ಯಕರ್ತರು ಬೆಳಿಗ್ಗೆ ಬಾಗಿಲು ತೆಗೆದ ತಕ್ಷಣ ಬಾಂಬ್ ಸ್ಫೋಟಗೊಂಡಿದೆ.

Leave a Reply

Your email address will not be published.

Social Media Auto Publish Powered By : XYZScripts.com