ಕೊಡಗಿಗೆ ಕೇಂದ್ರ ರಕ್ಷಣಾ ಸಚಿವೆ ಭೇಟಿ : ಸಂತ್ರಸ್ತರೊಂದಿಗೆ ನಿರ್ಮಲಾ ಸೀತಾರಾಮನ್​ ಮಾತುಕತೆ

ಕೊಡಗು : ಮಹಾಮಳೆಗೆ ಹಾಗೂ ಗುಡ್ಡಕುಸಿತದಿಂದ ಕಂಗೆಟ್ಟಿರುವ ಕೊಡಗಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ  ಸೀತಾರಾಮನ್ ಭೇಟಿ ನೀಡಿ. ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.   ​

ಕೊಡಗಿನ ಪ್ರವಾಹ ಸಂಭವಿಸಿದ ಪ್ರದೇಶಗಳಿಗೆ ಹಾಗೂ ಭೂಕುಸಿತವಾಗಿರುವ ಹಟ್ಟಿಹೊಳೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಅಲ್ಲಿನ ನೆರೆ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.

ಮಡಿಕೇರಿಯ ಬ್ರಾಹ್ಮಣರ ಕಲ್ಯಾಣ ಮಂಟಪ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್, ಸಂತ್ರಸ್ತರ ಸಮಸ್ಯೆ ಆಲಿಸಿ, ಸಾಂತ್ವನ ಹೇಳಿದರು. ನಿರ್ಮಲಾ ಸೀತರಾಮನ್‌ ಅವರೊಂದಿಗೆ ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published.