ಸಿದ್ದು ಮೇಲಿದ್ದ ಭ್ರಷ್ಟಾಚಾರ ಪ್ರಕರಣ ರೀ ಓಪನ್​ : ತನಿಖೆ ನಡೆಸುವಂತೆ ಸಿಎಂ ಆದೇಶ..!

ಬೆಂಗಳೂರು : ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ ಸರ್ಕಾರ ಆರಂಭವಾಗಿ ಮೂರು ತಿಂಗಳು ಆಗುತ್ತಿದೆ, ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರ ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ, ಅದಕ್ಕೆ ಸಾಕ್ಷಿ ಎಂಬಂತೆ ಸಿದ್ದರಾಮಯ್ಯ ಅವರ ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಹೆಚ್​ಡಿಕೆ ಆದೇಶಿಸಿದ್ದಾರೆ.

ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದಲ್ಲಿ 30 ಕೋಟಿ ರೂಪಾಯಿ ಹಗರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತರ ಹೆಸರು ಕೇಳಿಬಂದಿದ್ದು,  ಈ ಬಗ್ಗೆ ಬಿಜೆಪಿ ವಕ್ತಾರ ಎನ್​.ಆರ್​.ರಮೇಶ್​ 800 ಪುಟಗಳ ದಾಖಲೆಯೊಂದಿಗೆ ಎಸಿಬಿ ಸಿಎಂ ಕುಮಾರಸ್ವಾಮಿಗೆ ದೂರು ಸಲ್ಲಿಸಿದ್ರು, ದೂರನ್ನು ಪರಿಶೀಲಿಸಿದ ಸಿಎಂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಕಂದಾಯ ಇಲಾಖೆಗೆ ಆದೇಶಿಸಿತು., ಹಾಗೂ ತನಿಖೆ ನಡೆಸಿ ತೆಗೆದುಕೊಂಡ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಸಲ್ಲಿಸುವಂತೆ ಹಾಗೂ ಅರ್ಜಿದಾರರಿಗೆ ಮಾಹಿತಿ ಒದಗಿಸುವಂತೆ ಸಿಎಂ ಸಚಿವಾಲಯದಿಂದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ತಿಳಿಸಿತು.

Leave a Reply

Your email address will not be published.

Social Media Auto Publish Powered By : XYZScripts.com