Asian Games : ಬ್ಯಾಡ್ಮಿಂಟನ್ : ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸೈನಾ, ಸಿಂಧು

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೈನಾ ನೆಹ್ವಾಲ್ ಹಾಗೂ ಪಿ.ವಿ ಸಿಂಧು ಕ್ವಾರ್ಟರ್ ಫೈನಲ್ ಹಂತವನ್ನು ತಲುಪಿದ್ದಾರೆ. ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ ಅಶ್ವಿನಿ ಪೊನ್ನಪ್ಪ ಹಾಗೂ ಸಿಕ್ಕಿ ರೆಡ್ಡಿ ಸೋತು ನಿರ್ಗಮಿಸಿದ್ದಾರೆ.

ಶನಿವಾರ ನಡೆದ ಪಂದ್ಯದಲ್ಲಿ ಇಂಡೋನೇಷ್ಯಾದ ಫಿತ್ರಿಯಾನಿ ಅವರನ್ನು 21-6, 21-14 ಪಾಯಿಂಟ್ ಗಳಿಂದ ಮಣಿಸಿದ ಸೈನಾ ನೆಹ್ವಾಲ್ ಕ್ವಾರ್ಟರ್ ಫೈನಲ್ ಗೆ ಕಾಲಿಟ್ಟಿದ್ದಾರೆ. ಓಲಿಂಪಿಕ್ ಪದಕ ವಿಜೇತ ಆಟಗಾರ್ತಿ ಪಿ.ವಿ ಸಿಂಧು ಇಂಡೋನೇಷ್ಯಾದ ಗ್ರೆಗೊರಿಯಾ ಮಾರಿಸ್ಕಾ ಟುಂಜುಂಗ್ ಅವರ ವಿರುದ್ಧ 21-12, 21-15 ಪಾಯಿಂಟ್ ಗಳಿಂದ ಗೆಲುವು ಸಾಧಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com