ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಇದುವರೆಗೂ ನಯಾ ಪೈಸೆ ಪರಿಹಾರ ದೊರಕಿಲ್ಲ : ಕೃಷ್ಣ ಬೈರೇಗೌಡ

ಕೋಲಾರ : ‘ ನೆರೆ ಸಂತ್ರಸ್ಥರಿಗೆ ಕೇಂದ್ರದಿಂದ ಇದುವರೆಗೂ ನಯಾ ಪೈಸೆ ಪರಿಹಾರ ಸಿಕ್ಕಿಲ್ಲ ‘ ಎಂದು ಗ್ರಾಮೀಣ ಅಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಹೇಳಿಕೆ ನೀಡಿದ್ದಾರೆ. ‘ ರಾಜ್ಯ ಸರ್ಕಾರ ಈಗಾಗಲೆ ಪರಿಹಾರಕ್ಕಾಗಿ 2 ಸಾವಿರ ಕೋಟಿ ನೀಡುವಂತೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ದಿಂದ ಪೂರಕ ಸ್ಪಂದನೆ ಸಿಗದ ಹಿನ್ನೆಲೆ, ರಾಜ್ಯ ಸರ್ಕಾರದಿಂದ ಅಗತ್ಯ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ‘ ಎಂದಿದ್ದಾರೆ.

ಇನ್ನಾದರೂ ಕೇಂದ್ರ ಸರ್ಕಾರ ತನ್ನ ಧೋರಣೆ ಬದಲಿಸುವಂತೆ ಒತ್ತಾಯಪಡಿಸಿದ ಸಚಿವ ಕೃಷ್ಣಬೈರೇ ಗೌಡ ಮತ್ತೆ ಸಿಎಂ ಆಗುವ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಲಿಲ್ಲ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಕ್ರೋಶಕ್ಕೂ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ.

Leave a Reply

Your email address will not be published.

Social Media Auto Publish Powered By : XYZScripts.com