ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಹೆಚ್ಚು ದಿನ ಉಳಿಯಲ್ಲ : ವಿಶ್ವೇಶ್ವರ ಹೆಗಡೆ ಕಾಗೇರಿ

ಶಿವಮೊಗ್ಗ : ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ ರಾಜ್ಯದ 108 ಕಡೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ 3 ಮಹಾನಗರ ಪಾಲಿಕೆಗಳಿವೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಆಡಳಿತಕ್ಕೆ ತರಲು ಯತ್ನಿಸಲಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸವಿಟ್ಟು ಮತಹಾಕಿದರು ‘ ಎಂದಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಶಿವಮೊಗ್ಗದಲ್ಲಿ 25 ಕ್ಕೂ ಹೆಚ್ಚಿನ ಸ್ಥಾನ ಬಿಜೆಪಿ ಹಿಡಿಯಲಿದೆ. ಬಿಜೆಪಿ ಸಂಘಟನೆ ಚೆನ್ನಾಗಿದೆ. ಜವಾಬ್ದಾರಿಗಳನ್ನು ಹಂಚಿಕೊಂಡಿದ್ದೇವೆ. ಸಾಮೂಹಿಕ ಪ್ರಚಾರ ಕಾರ್ಯ ನಡೆಯುತ್ತಿದೆ. ಹಿಂದೆ ಯಡಿಯೂರಪ್ಪ ಸದಾನಂದಗೌಡ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಶಿವಮೊಗ್ಗ ಅಭಿವೃದ್ಧಿ ಕಂಡಿತ್ತು. ಬಳಿಕ ಅಭಿವೃದ್ದಿ ನಡೆಯಲಿಲ್ಲ ‘ ಎಂದಿದ್ದಾರೆ.

‘ ಕಾಂಗ್ರೆಸ್- ಜೆಡಿಎಸ್ ಅಪವಿತ್ರ ಮೈತ್ರಿ. ಅಪವಿತ್ರ ಮೈತ್ರಿ ಹೆಚ್ಚು ದಿನ ಉಳಿಯಲ್ಲ. ಅಪವಿತ್ರ ಮೈತ್ರಿ‌ ಹೆಚ್ಚು ದಿನ ಉಳಿಯಲ್ಲ ಅನ್ನೋ ಸೂಚನೆಗಳು ಸಿಗುತ್ತಿವೆ..
ಕಾಂಗ್ರೆಸ್- ಜೆಡಿಎಸ್ ಸರ್ಕಾರ ಬಿದ್ದುಹೋಗಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಭವಿಷ್ಯ ನುಡಿದಿದ್ದಾರೆ.
ಅಪವಿತ್ರ ಮೈತ್ರಿ ಜನರ ವಿಶ್ವಾಸ ಕಳೆದುಕೊಂಡಿದೆ. ಹೆಚ್‌ಡಿಕೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ತಕ್ಷಣ ರಾಜ್ಯ ಮತ್ತಷ್ಟು ದಿಕ್ಕು ತಪ್ಪುತ್ತಿದೆ ‘ ಎಂದರು.

ಸುದ್ದಿಗೋಷ್ಠಿಯಲ್ಲಿ ಪರಿಷತ್ ಸದಸ್ಯ ರುದ್ರೇಗೌಡ, ಮುಖಂಡ ದತ್ತಾತ್ರಿ, ಅರುಣ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com