ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ ಲಾರಿ ಪಲ್ಟಿ : ತಪ್ಪಿದ ಭಾರೀ ಅನಾಹುತ

ದಾವಣಗೆರೆ : ಸಿಲಿಂಡರ್ ತುಂಬಿದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಪಲ್ಟಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಹೊರವಲಯದ ಎಡಿಬಿ ಕಾಲೇಜ್ ಬಳಿ ನಡೆದಿದೆ. ಚಾಲಕ ಸೇರಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ. ರಸ್ತೆ ಬದಿ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ದಾವಣಗೆರೆ ಕಡೆಯಿಂದ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಗೆ ಹೋಗುತ್ತಿದ್ದ ಇಂಡೇನ್ ಕಂಪನಿಗೆ ಸೇರಿದ ಲಾರಿ ಪಲ್ಟಿಯಾಗಿದ್ದು, ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೆಲ ಹೊತ್ತು ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ತುಂಬಿದ ಸಿಲಿಂಡರ್ ಇದ್ದ ಕಾರಣ ಸುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಠಿಯಾಗಿದೆ. ಯಾವುದೇ ಅನಾಹುತ ಆಗದಂತೆ ಅಗ್ನಿ ಶಾಮಕ ದಳದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com