ಕೆರೆಗೆ ನೀರು ಹರಿಸಲು ಒತ್ತಾಯಿಸಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೈತರು..!

ತುಮಕೂರು : ಮದಲೂರು ಕೆರೆಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಲು ಒತ್ತಾಯಿಸಿ ರೈತರು ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ತುಮಕೂರಿನ ಮದಲೂರು ಕೆರೆಗೆ ಹೇಮಾವತಿ ಜಲಾಶಯದಿಂದ ಕೆರೆಗೆ ನೀರು ಹರಿಸಲು ಕಾಲುವೆ ನಿರ್ಮಾಣವಾಗಿದ್ದು ನೀರು ಹರಿಸಲು ಮನವಿ ರೈತರು ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. 1500 ಹೆಕ್ಟೇರ್ ಗೂ ಅಧಿಕ ವ್ಯಾಪ್ತಿಯ ಮದಲೂರು ಕೆರೆಗೆ ನೀರು ಹರಿಯುವುದರಿಂದ ಎಂಟತ್ತು ಕೆರೆಗಳು ತುಂಬಲಿವೆ. ಮೊದಲ ಹಂತದಲ್ಲಿ ರಕ್ತದಲ್ಲಿ ಪತ್ರ ಬರೆದು ಹೋರಾಟಕ್ಕಿಳಿದ ರೈತರು, ಹೋರಾಟ ತೀವ್ರಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಲು ಸಿ.ಎಂ.ಗೆ ರೈತರ ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com