2002 ಗೋಧ್ರಾ ರೈಲು ಹತ್ಯಾಕಾಂಡ : ಇಬ್ಬರಿಗೆ ಜೀವಾವಧಿ ಶಿಕ್ಷೆ – ಮೂವರು ಖುಲಾಸೆ

2002ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸೋಮವಾರ ತೀರ್ಪು ಪ್ರಕಟಿಸಿರುವ ಎಸ್ ಐಟಿ ವಿಶೇಷ ನ್ಯಾಯಾಲಯ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರನ್ನು ಬಿಡುಗಡೆಗೊಳಿಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಫಾರೂಖ್ ಭಾನಾ ಹಾಗೂ ಇಮ್ರಾನ್ ಶೇರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.

2017 ರ ಅಕ್ಟೋಬರ್ ನಲ್ಲಿ ಗುಜರಾತ್ ಉಚ್ಛ ನ್ಯಾಯಾಲಯ 11 ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು, ಕಠಿಣ ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಅದೇಶ ಹೊರಡಿಸಿತ್ತು. ಅಲ್ಲದೇ ಇತರ 20 ಆರೋಪಿಗಳಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ ಎತ್ತಿಹಿಡಿದಿತ್ತು.

2002 ಫೆಬ್ರುವರಿ 27 ರಂದು ಸಾಬರಮತಿ ಎಕ್ಸ್ ಪ್ರೆಸ್ ರೈಲಿನ ಬೋಗಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 59 ಕರಸೇವಕರನ್ನು ಕೊಂದಿರುವ ಆರೋಪದ ಮೇಲೆ ಶಿಕ್ಷೆ ವಿಧಿಸಲಾಗಿತ್ತು.

Leave a Reply

Your email address will not be published.