Asian Games : ಬ್ಯಾಡ್ಮಿಂಟನ್ – ಫೈನಲ್‍ಗೆ ಲಗ್ಗೆಯಿಟ್ಟ ಸಿಂಧು : ಸೈನಾ ನೆಹ್ವಾಲ್ ಪರಾಭವ

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿ.ವಿ ಸಿಂಧು ಪ್ರವೇಶಿಸಿದ್ದಾರೆ. ಸೋಮವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಪಿ.ವಿ ಸಿಂಧು ಜಪಾನಿನ ಅಕಾನೆ ಯಾಮಾಗುಚಿ ವಿರುದ್ಧ 21-17,15-21, 21-10 ಪಾಯಿಂಟ್ ಗಳಿಂದ ಗೆಲುವು ಸಾಧಿಸಿದ್ದಾರೆ.

ಸೋಮವಾರ ನಡೆದ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಸೈನಾ ನೆಹ್ವಾಲ್ ಚೀನೀ ತೈಪೆಯ ತಾಯೀ ಜು ಯಿಂಗ್ ವಿರುದ್ಧ 17-21, 14-21 ಪಾಯಿಂಟ್ ಗಳಿಂದ ಸೋಲನುಭವಿಸಿದ್ದಾರೆ. ಇದರೊಂದಿಗೆ ಸೈನಾ ನೆಹ್ವಾಲ್ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಪಿ.ವಿ ಸಿಂಧು ತಾಯೀ ಜು ಇಂಗ್ ವಿರುದ್ಧ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ಫೈನಲ್ ನಲ್ಲಿ ಚಿನ್ನದ ಪದಕಕ್ಕಾಗಿ ಸೆಣಸಾಡಲಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com