2019ರ ಲೋಕಸಭೆ ಚುನಾವಣೆಯಲ್ಲಿ BJP ಸಂಪೂರ್ಣ ಅಳಿದು ಹೋಗಲಿದೆ : ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಭಾರತೀಯ ಜನತಾ ಪಾರ್ಟಿಯ ವಿರುದ್ಧ ಹರಿಹಾಯ್ದಿದ್ದಾರೆ. ‘ 2019 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಅಳಿದು ಹೋಗಲಿದೆ ‘ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

‘ ಕೇಂದ್ರ ಸರ್ಕಾರದ NRC (ರಾಷ್ಟ್ರೀಯ ಪೌರತ್ವ ನೋಂದಣಿ) ಪ್ರಯೋಗವನ್ನು ಪಶ್ಚಿಮ ಬಂಗಾಳದಲ್ಲಿ ನಡೆಯಲು ಬಿಡುವುದಿಲ್ಲ. ಇದು ಬೆಂಗಾಲಿ, ಬಿಹಾರಿ ಹಾಗೂ ಹಿಂದೂಗಳನ್ನು ಪ್ರತ್ಯೇಕಿಸುವ ಪ್ರಯತ್ನವಾಗಿದೆ. ಬಿಜೆಪಿಯವರು ನಮಗೆ ಚಾಲೆಂಜ್ ಮಾಡುತ್ತಿದ್ದಾರೆ, ಅದಕ್ಕೆ ನಾವು ತಕ್ಕ ಪ್ರತ್ಯುತ್ತರ ನೀಡಲಿದ್ದೇವೆ ‘ ಎಂದು ಮಮತಾ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಗಳ ಉದಾಹರಿಸಿ ಮಾತನಾಡಿದ ಅವರು ‘ ರಾಜ್ಯದಲ್ಲಿ ಬಿಜೆಪಿ ಕೊಲೆಯ ರಾಜಕೀಯ ಮಾಡುತ್ತಿದೆ. ಆ ಮೂಲಕ ಕೆಲವು ಸೀಟುಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಿಪಿಐ (ಎಮ್) ನ ಮಾಜಿ ಗೂಂಡಾಗಳು ಈಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ‘ ಎಂದರು.

 

Leave a Reply

Your email address will not be published.

Social Media Auto Publish Powered By : XYZScripts.com