ಸಿದ್ದು ಮತ್ತೆ ಸಿಎಂ ಆಗುತ್ತೇನೆ ವಿಚಾರ : ಸಿದ್ದರಾಮಯ್ಯ ವಿರುದ್ದ ವಿಶ್ವನಾಥ್​ ಕಿಡಿ

ಬೆಂಗಳೂರು :ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತೇನೆಂಬ ಹೇಳಿಕೆ  ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿದ್ದು, ಈ ಹೇಳಿಕೆಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​. ವಿಶ್ವನಾಥ್​ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿಶ್ವನಾಥ್​, ಸಮನ್ವಯ ಸಮಿತಿ ಇರುವುದು ಒಡೆಯುವುದಕ್ಕಲ್ಲ. ಕಟ್ಟುವುದಕ್ಕೆ. ಸರ್ಕಾರ ಮತ್ತು ಮೈತ್ರಿ ಪಕ್ಷಗಳ ನಡುವೆ ಸೌಹಾರ್ತದೆ ಮೂಡಿಸುವುದಕ್ಕೆ. ಮುಂದಿನ ಐದು ವರ್ಷಗಳ ಕಾಲ ಹೆಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಎಂದು ಹೇಳಿದ್ದಾರೆ. ಮೈತ್ರಿ ಸರ್ಕಾರ ಸುಗಮವಾಗಿ ಸಾಗಿಸುವಲ್ಲಿ ಸಿದ್ದರಾಮಯ್ಯ ಅವರು ವಿಫಲರಾಗುತ್ತಿದ್ದಾರೆ.
h vishwanath, and, cm, ಗೆ ಚಿತ್ರದ ಫಲಿತಾಂಶ
ಮೈತ್ರಿ ಸರ್ಕಾರದಲ್ಲಿ ಮೂಡುವ ಬಿರುಕುಗಳು ಹಾಗೂ ಬಿಕ್ಕಟ್ಟನ್ನು ಸರಿಪಡಿಸುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಇದಕ್ಕಾಗಿ ವಿಧಾನಸೌಧದಲ್ಲಿ ಅವರಿಗೆ ಕಚೇರಿಯನ್ನೂ ನೀಡಲಾಗಿದೆ. ಆದರೆ, ಸಿದ್ದರಾಮಯ್ಯ ಅವರೇ ಸ್ವತಃ ಮೈತ್ರಿ ಸರ್ಕಾರವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳುವ ಬಗ್ಗೆ ಸಿದ್ದರಾಮಯ್ಯ ಅವರು ಬೆದರಿಕೆಗಳನ್ನು ಹಾಕುತ್ತಿದ್ದಾರೆ ಎಂದು ಸಿದ್ದರಾಮಯ್ಯನವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com