ಸರ್ಕಾರ ಬದಲಾಗುತ್ತದೆ ಎಂದು ಬಿಜೆಪಿ ಕನಸು ಕಾಣುತ್ತಿದೆ : ಸಿದ್ದರಾಮಯ್ಯ

ಹುಬ್ಬಳ್ಳಿ : ‘ಸಮ್ಮಿಶ್ರ ಸರ್ಕಾರ ಮುರಿದು ಬೀಳುವುದಿಲ್ಲ, ಸರ್ಕಾರ ಭದ್ರವಾಗಿದೆ. ಸರ್ಕಾರ ಬದಲಾಗುತ್ತದೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ’ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಸಮ್ಮಿಶ್ರ ಸರ್ಕಾರ ಏನೇ ಮಾಡಿದರೂ ಅದು ಎರಡು ಪಕ್ಷಕ್ಕೂ ಗೌರವ ಸಲ್ಲುತ್ತದೆ. ನಮ್ಮವರೇ ಮುಖ್ಯಮಂತ್ರಿಯಾಗಿದ್ದಾರೆ,  ಹೀಗಾಗಿ ನಮ್ಮನ್ನು ಸಮ್ಮಿಶ್ರ ಸರ್ಕಾರದಲ್ಲಿ ಕಡೆಗಣಿಸಲಾಗಿದೆ ಎನ್ನುವುದು ಸರಿಯಲ್ಲ. ನಾವು ಜಾರಿಗೆ ತಂದಿರುವ ಎಲ್ಲ ಯೋಜನೆಗಳಿಗೂ ಹಣ ಬಿಡುಗಡೆಯಾಗುತ್ತದೆ. ಈ ಕುರಿತು ಸಮನ್ವಯ ಸಮಿತಿಯಲ್ಲಿ   ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಸಿದ್ದರಾಮಯ್ಯ ಹೇಳಿದ್ರು.

‘ಜೆಡಿಎಸ್‌ನವರು ಕೆ‌.ಸಿ. ವೇಣುಗೊಪಾಲ್‌ಗೆ ಪತ್ರ ಬರೆದಿಲ್ಲ, ದೂರು ನೀಡಿಲ್ಲ, ಮುಂದಿನ ಚುನಾವಣೆಗೆ ನಿಲ್ಲುತ್ತೇನೆ ಎಂದು ನಾನು ಹೇಳಿಲ್ಲ ಜನರು ಆಶೀರ್ವಾದ ಮಾಡಿದ್ರೆ ಮುಂದೆ ಸಿಎಂ ಆಗುತ್ತೇನೆ ಅಂತ ಹೇಳಿದ್ದೇನೆ. ಸರ್ಕಾರ ಬದಲಾಗುತ್ತದೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ  ಹಾಗೂ ಕಾಂಗ್ರೆಸ್​ ಶಾಸಕರು ಬಿಜೆಪಿ ಸೇರುತ್ತಾರೆ ಎನ್ನುವುದು ಸುಳ್ಳು’ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com