ಐತಿಹಾಸಿಕ ಬಸವೇಶ್ವರ ಜಾತ್ರೆ : ಯುವತಿಯಿಂದ ಅಶ್ಲೀಲ ನೃತ್ಯ ಪ್ರದರ್ಶನ, ಭಕ್ತರಿಂದ ಆಕ್ರೋಶ..!

ವಿಜಯಪುರ : ಸಮಾನತೆ ಸಾರಿದ ವಿಶ್ವಗುರು ಬಸವಣ್ಣನ ದೇವಸ್ಥಾನದಲ್ಲಿ  ಅಶ್ಲೀಲ ನೃತ್ಯ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ನಡೆದಿದೆ.

ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂಘಟಕರು ಆಗಸ್ಟ್ 28 ರಂದು ನಡೆದ ರಸಮಂಜರಿ ಕಾರ್ಯಕ್ರಮದ ಹೆಸರಿನಲ್ಲಿ ಯುವತಿಯಿಂದ ಹಿಂದಿ ಹಾಡಿಗೆ ಹುಡುಗಿಯೊಬ್ಬಳು ಅಶ್ಲೀಲ ನೃತ್ಯ ಪ್ರದರ್ಶನ ಮಾಡಿರುವುದು ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಸವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರಿಗೆ ಸಮಾನತೆ ನೀಡಿದ ದಾರ್ಶನಿಕನ ಜನ್ಮ ಸ್ಥಳದಲ್ಲೇ ಮಹಿಳೆಯಿಂದ ಅಶ್ಲೀಲ ನೃತ್ಯ ಮಾಡಿಸಿದ ಆಯೋಜಕರು ಮೇಲೆ ಸಂಘಟಕರು ಬಸವಣ್ಣನವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೇ ಈ ಕುರಿತು ಸಚಿವರು ಏನು ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com