ಚಿಕ್ಕಮಗಳೂರು ‌: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು‌ – ಪ್ರಾಣಾಪಾಯದಿಂದ ಪಾರಾದ ಚಾಲಕ

ಚಿಕ್ಕಮಗಳೂರು ‌: ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು‌ ನಗರದ ದಂಟರಮಕ್ಕಿ ಕೆರೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಯಲ್ಲಿ ಮುಳುಗಿದ್ದು, ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com