ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ಅನುಭವಿಸಿ, ಬ್ಲೇಮ್ ಮಾಡಿ ಹೋಗೋದು ಸರಿಯಲ್ಲ : ಪ್ರಿಯಾಂಕ್ ಖರ್ಗೆ

ಕಲಬುರ್ಗಿ : ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಬಿಜೆಪಿ ಸೇರ್ಪಡೆ ವಿಚಾರವಾಗಿ ಕಲಬುರಗಿಯಲ್ಲಿ ಸಮಾಜ ಕಲ್ಯಾಣ ಸಚಿವ ಪ್ರೀಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ ಚಿಂಚನಸೂರು ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಹೋಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿರುವುದಕ್ಕೆ ಕಾಂಗ್ರೆಸ್ ಕಾರಣವಲ್ಲ. ಪಕ್ಷದಲ್ಲಿ ಸುದೀರ್ಘವಾಗಿ ಎಲ್ಲವನ್ನೂ ಅನುಭವಿಸಿದ್ದಾರೆ. ಆದರೆ ಪಕ್ಷ ಬಿಡೋವಾಗ ಬ್ಲೇಮ್ ಮಾಡಿ ಹೋಗುವುದು ಸರಿಯಲ್ಲ. ಯಾರೇ ಪಕ್ಷ ಬಿಟ್ಟು ಹೋಗಲಿ, ಪಕ್ಷಕ್ಕೇನು ನಷ್ಟವಿಲ್ಲ, ನಮಗೆ ಜನಶಕ್ತಿಯಿದೆ ‘ ಎಂದಿದ್ದಾರೆ.

‘ ನಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆರನ್ನ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವುದು ಸೋಲಿಸುವುದು ಜನತೆಗೆ ಬಿಟ್ಟದ್ದು ‘  ಎಂದು ಕಲಬುರ್ಗಿಯಲ್ಲಿ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com