Cricket : ಏಷ್ಯಾಕಪ್‍ಗೆ ಟೀಮ್ ಇಂಡಿಯಾ ಆಯ್ಕೆ – ಕೊಹ್ಲಿಗೆ ವಿಶ್ರಾಂತಿ, ರೋಹಿತ್‍ಗೆ ನಾಯಕತ್ವ

ಸೆಪ್ಟೆಂಬರ್ 15 ರಿಂದ ಆರಂಭಗೊಳ್ಳಲಿರುವ ಏಷ್ಯಾ ಕಪ್ ಟೂರ್ನಿಗಾಗಿ 16 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಲಾಗಿದೆ.

ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಗೆ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ಮನೀಶ್ ಪಾಂಡೆ ಹಾಗೂ ಕೇದಾರ್ ಜಾಧವ್ ತಂಡಕ್ಕೆ ಮರಳಿದ್ದು, 20 ವರ್ಷದ ವೇಗಿ ಖಲೀಲ್ ಅಹ್ಮದ್ ಗೆ ಅವಕಾಶ ನೀಡಲಾಗಿದೆ.

ತಂಡ ಇಂತಿದೆ –

ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್ ರಾಹುಲ್, ಅಂಬಟಿ ರಾಯುಡು, ಮನೀಶ್ ಪಾಂಡೆ, ಕೇದಾರ್ ಜಾಧವ್, ಮಹೇಂದ್ರ ಸಿಂಗ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಸಿಂಗ್ ಚಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್.

Leave a Reply

Your email address will not be published.