‘ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ’ : ಎನ್​ ಮಹೇಶ್​

ಕೊಳ್ಳೆಗಾಲ : ‘ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್  ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದಲ್ಲಿ ಮಾತನಾಡಿದ  ಸಚಿವ ಎನ್. ಮಹೇಶ್,  ‘ಪ್ರಸ್ತುತ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ನಾನು ಬೆಂಬಲ ನೀಡುತ್ತೇನೆ.  ಅಭಿವೃದ್ಧಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಸಾಕಷ್ಟು ಕನಸು ಕಟ್ಟಿಕೊಂಡಿದ್ದಾರೆ. ಅಂತಹವರಿಗೆ ಅಡಚಣೆ ಉಂಟು ಮಾಡಬಾರದು. ಕಾಂಗ್ರೆಸ್‍ನವರು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು.

n mahesh ಗೆ ಚಿತ್ರದ ಫಲಿತಾಂಶ

‘ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇವರಿಬ್ಬರನ್ನು ಮುಂದೆ ತಂದು ನಿಮ್ಮ ಆಯ್ಕೇ ಏನು ಅಂದರೇ ನಾನು ಕುಮಾರಸ್ವಾಮಿ ಅವರನ್ನೇ ಬೆಂಬಲಿಸುತ್ತೇನೆ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಅವರೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ’ ಎಂದು ತಿಳಿಸಿದ್ರು.

Leave a Reply

Your email address will not be published.

Social Media Auto Publish Powered By : XYZScripts.com