ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ್​ ಹಿಟ್ನಾಳ್​…!

ಕೊಪ್ಪಳ : ಕಳೆದ 8 ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೆ ಬಸವರಾಜ ಹಿಟ್ನಾಳ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 5 ಕ್ಷೇತ್ರದಲ್ಲಿ, ಕೇವಲ 2 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಈ ಕಾರಣಕ್ಕಾಗಿ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ, ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ ಹಿನ್ನೆಲೆ ಸೋಲಿನ ನೈತಿಕ ಹೊಣೆ ಹೊತ್ತು  ರಾಜೀನಾಮೆ ನೀಡಿದ್ದು ಎಂದು ಹಿಟ್ನಾಳ್ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಹಿಟ್ನಾಳ ಸ್ಥಾನಕ್ಕೆ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಶಿವರಾಜ್ ತಂಗಡಗಿ ಹೆಸರು ಕೇಳಿ ಬರುತ್ತಿದ್ದು, ಇವರೇ ಕೊಪ್ಪಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗುವ ಸಾಧ್ಯತೆ ಎನ್ನಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com