ವಿಶ್ವವಿಖ್ಯಾತ ಮೈಸೂರು ದಸರಾ : ಅರ್ಜುನನ ನೇತೃತ್ವದಲ್ಲಿ ಗಜಪಯಣ ಆರಂಭ..!

ಮೈಸೂರು, : 2018ನೇ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಸಿದ್ಧತೆಗಳಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಭಾನುವಾರ ಗಜಪಯಣಕ್ಕೆ ಚಾಲನೆ ನೀಡಲಾಗಿದೆ. ಧನಂಜಯ ಎಂಬ ಆನೆ ಈ ಬಾರಿಯ ದಸರಾದಲ್ಲಿ ಮೊದಲ ಬಾರಿಗೆ ಭಾಗವಹಿಸುತ್ತಿದೆ.

ಭಾನುವಾರ ಹುಣಸೂರು ತಾಲೂಕಿನ ವೀರನಹೊಸಹಳ್ಳಿ‌ ಪ್ರದೇಶದಲ್ಲಿರುವ ನಾಗರಹೊಳೆ ದ್ವಾರದ ಮುಂದೆ ಆನೆಗಳಿಗೆ ಪೂಜೆ ಸಲ್ಲಿಸಿ 2018ನೇ ಸಾಲಿನ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವ ಸಾ.ರಾ.ಮಹೇಶ್, ಜೆಡಿಎಸ್ ಅಧ್ಯಕ್ಷ ಮತ್ತು ಹುಣಸೂರು ಶಾಸಕ ಎಚ್.ವಿಶ್ವನಾಥ್ ಮುಂತಾದವರು ಪಾಲ್ಗೊಂಡಿದ್ದರು.

ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನ  ನೇತೃತ್ವದಲ್ಲಿ ವರಲಕ್ಷ್ಮೀ , ವಿಕ್ರಮ, ಚೈತ್ರ, ಧನಂಜಯ,  5 ಆನೆಗಳು ಗಜಪಯಣವನ್ನು ಆರಂಭಿಸಿವೆ. ಸೆಪ್ಟೆಂಬರ್ 3ರಂದು ಆನೆಗಳು ಮೈಸೂರು ಅರಮನೆಗೆ ಬಂದು ಸೇರಲಿವೆ. ಪ್ರತಿ ವರ್ಷಕ್ಕಿಂತ ಹತ್ತು ದಿನ ತಡವಾಗಿ ಗಜಪಯಣ ಆರಂಭವಾಗಿದೆ. ಕೊಡಗಿನಲ್ಲಿ ಅದ ಪ್ರಕೃತಿ ವಿಕೋಪದ ಕಾರಣ ಸರಳವಾಗಿ ಈ ಬಾರಿಯ ದಸರಾವನ್ನು ಆಚರಣೆ ಮಾಡಲಾಗುತ್ತದೆ ಎನ್ನಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com