ಮೈಸೂರು : ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ ಆರೋಪ – SDPI ಕಾರ್ಯಕರ್ತನ ಮೇಲೆ ಹಲ್ಲೆ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ ಆರೋಪದ ಮೇಲೆ ಎಸ್‌ಡಿಪಿಐ ಕಾರ್ಯಕರ್ತನ ಮೇಲೆ‌ ಕೈ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ನಡೆಸಲಾಗಿರುವ ಘಟನೆ ಮೈಸೂರಿನ ಶಾಂತಿನಗರದ ರಮಚಾ ಮಸೀದಿ ಬಳಿ ನಡೆದಿದೆ.

ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.  ಘಟನೆಯಲ್ಲಿ ಓರ್ವ ಎಸ್‌ಡಿ‌ಪಿಐ ಕಾರ್ಯಕರ್ತನ ಮುಖ ರಕ್ತಸಿಕ್ತವಾಗಿದೆ.
ನೂತನ ಪಾಲಿಕೆ ಸದಸ್ಯ ಅಯಾಜ್ ಪಾಷಾ ಬೆಂಬಲಿಗರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದ್ದು, ಕೆ.ಆರ್.ಆಸ್ಪತ್ರೆಗೆ ಗಾಯಾಳು ಕಾರ್ಯಕರ್ತರನ್ನು ರವಾನೆ ಮಾಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com