ಉತ್ತರ ಪ್ರದೇಶ : ಯುವಕರ ಗುಂಪಿನಿಂದ ಥಳಿತ – ನಿವೃತ್ತ ಪೋಲೀಸ್ ಅಧಿಕಾರಿ ಸಾವು.!

ನಿವೃತ್ತ ಪೋಲೀಸ್ ಅಧಿಕಾರಿಯೊಬ್ಬರನ್ನು ಮೂವರು ಯುವಕರು ಬಡಿಗೆಯಿಂದ ಮನ ಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಸೋಮವಾರ ನಡೆದಿದೆ. ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ 70 ವರ್ಷದ ನಿವೃತ್ತ ಪೋಲೀಸ್ ಅಧಿಕಾರಿ ಅಬ್ದುಲ್ ಸಮದ್ ಖಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸೈಕಲ್ ಮೇಲೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಬಡಿಗೆಯಿಂದ ಹೊಡೆಯಲು ಆರಂಭಿಸಿದ್ದಾನೆ. ಆಗ ಪೋಲೀಸ್ ಸೈಕಲ್ ಮೇಲಿಂದ ಕೆಳಗೆ ಬಿದ್ದ ನಂತರ ಇನ್ನಿಬ್ಬರು ಆಗಮಿಸಿದ್ದಾರೆ. ಮೂವರು ಯುವಕರು ಸೇರಿಕೊಂಡು ಹಲ್ಲೆ ನಡೆಸಿದ ಬಳಿಕ ಪರಾರಿಯಾಗಿದ್ದಾರೆ. ಹೊಡೆಯುವ ಸಂದರ್ಭದಲ್ಲಿ ದಾರಿಹೋಕರು ಯಾರೂ ನೆರವಿಗೆ ಬರಲಿಲ್ಲ. ಸೋಮವಾರ ಬೆಳಿಗ್ಗೆ ನಡೆದಿರುವ ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತೀವ್ರವಾಗಿ ಗಾಯಗೊಂಡು ನಿತ್ರಾಣರಾಗಿ ಬಿದ್ದಿದ್ದ ಪೋಲೀಸ್ ಅಧಿಕಾರಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ವೈದ್ಯರ ಯತ್ನ ಫಲ ನೀಡದೇ ಅಧಿಕಾರಿ ಸಾವನ್ನಪ್ಪಿದ್ದಾರೆ.

ಈ ಘಟನೆಯ ಪ್ರಮುಖ ಆರೋಪಿಯನ್ನು ಜುನೈದ್ ಎಂದು ಗುರುತಿಸಲಾಗಿದ್ದು, ರೌಡಿಯಾಗಿರುವ ಈತನ ಮೇಲೆ ಸ್ಥಳೀಯ ಪೋಲೀಸ್ ಠಾಣೆಯಲ್ಲಿ ಮೊದಲೇ 10 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

 

 

Leave a Reply

Your email address will not be published.

Social Media Auto Publish Powered By : XYZScripts.com