ಕಾರು, ಕ್ಯಾಂಟರ್ ನಡುವೆ ಭೀಕರ ರಸ್ತೆ ಅಪಘಾತ : ಮೂರು ವಿದ್ಯಾರ್ಥಿಗಳ ದುರ್ಮರಣ..!

ಬೆಂಗಳೂರು : ಬೆಳ್ಳಂ ಬೆಳಗ್ಗೆ ಕಾರು ಮತ್ತು ಅಕ್ಯಾಂಟರ್ ನಡುವೆ ಭೀಕರ ರಸ್ತೆ ಅಪಘಾತದಿಂದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವನಹಳ್ಳಿ ಹೊರವಲಯದ ಸಣ್ಣಾ ಅಮಾನಿಕೆರೆ ಬಳಿ ನಡೆದಿದೆ.

ಕಿಮ್ಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ವಿಶಾಲ್, ಪ್ರಜ್ವಲ್, ಮತ್ತು ಭೂಷಣ್ ಮೃತ ದುರ್ದೈವಿಗಳು. ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.  ಕ್ವಾಂಟರ್​ ಬಂದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಭೀಕರವಾಗಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಮೃತ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆಗೆ ಸಂಬಂಧ  ಪಟ್ಟಂತೆ ಏರ್ಪೋಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com