ರಫೇಲ್ ಹಗರಣದಲ್ಲಿ PM ಮೋದಿ ನೇರವಾಗಿ ಭಾಗಿಯಾಗಿದ್ದಾರೆ : ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ‘ ಸೆಪ್ಟೆಂಬರ್ ಕೊನೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಉಳಿದ ಆರು ಸ್ಥಾನಗಳನ್ನು ಭರ್ತಿ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಲು ಬಿಡುವುದಿಲ್ಲ. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ‘ ಎಂದಿದ್ದಾರೆ.

‘ ಕಾಂಗ್ರೆಸ್‌ ನಲ್ಲಿ ಯಾವುದೇ ಒಳ ಜಗಳ ಇಲ್ಲ. ರಮೇಶ್ ಜಾರಕಿಹೊಳಿ ಮಾತನಾಡುವ ಶೈಲಿಯೇ ಹಾಗೆ. ನಮ್ಮಲ್ಲಿ ಯಾವುದೇ ಒಳ ಜಗಳ ಇಲ್ಲಾ ‘ ಎಂದರು.

‘ ರಾಫೆಲ್ ಹಗರಣದಲ್ಲಿ ನೇರವಾಗಿ ಮೋದಿ ಭಾಗಿಯಾಗಿದ್ದಾರೆ. ರಾಫೇಲ್ ಡೀಲ್ ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ. ಈ ಕುರಿತು ಕಾಂಗ್ರೆಸ್ ನಿಂದ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡಲಾಗುವುದು ‘ ಎಂದು ಹೇಳಿದ್ದಾರೆ.

‘ ದಿನೇ ದಿನೇ ತೈಲ ಬೆಲೆ ಏರಿಕೆ ಆಗುತ್ತಿದೆ , ರೂಪಾಯಿ ಮೌಲ್ಯ ಕುಸಿಯುತ್ತಿದೆ. ವಿತ್ತ ಸಚಿವ ಅರುಣ್ ಜೆಟ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ದೇಶದಲ್ಲಿ ಆರ್ಥಿಕ ಅರಾಜಕತೆ ಉಂಟಾಗಿದೆ. ಇದಕ್ಕೆ ನೇರ ಕಾರಣ ಪ್ರಧಾನಿ ಮೋದಿ. ಮೋದಿ ಕೇವಲ ಸೂಟು ಬೂಟ್ ಹಾಕಿ ಭಾಷಣಕ್ಕೆ ಸೀಮಿತರಾಗಿದ್ದಾರೆ ‘ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೆ ಪಿ ಸಿ ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com