ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ : ಕೆ. ಸುಧಾಕರ್

ಚಿಕ್ಕಬಳ್ಳಾಪುರ : ಸಮ್ಮಿಶ್ರ ಸರ್ಕಾರದ ಬಗ್ಗೆ ಶಾಸಕ ಡಾ.ಕೆ.ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ದಿನ ಅಸಮಾಧಾನ ಹೊರಹಾಕಿರುವ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ‘ 80 ಸ್ಥಾನ ಇರೋ ಸಿದ್ಧರಾಮಯ್ಯ ಯಾಕೆ ಮುಖ್ಯಮಂತ್ರಿ ಅಗಬಾರದು ‘ ಎಂದು ಕೇಳಿದ್ದಾರೆ.

‘ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುತ್ತಾರೆ. ಅವರು ನಾಳೆಯೇ ಮುಖ್ಯಮಂತ್ರಿ ಆಗ್ತಿನಾಂದ ಹೇಳಿಲ್ಲ. ಸಿದ್ದರಾಮಯ್ಯರವರಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸಚಿವನಾಗಲು ಮನಸ್ಸು ಇಲ್ಲ ‘ ಎಂದರು.

ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿ ಅಯೋಜನೆ ಮಾಡಿದ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಅವರು ಬಿಜೆಪಿ ಪಕ್ಷದವರು ಹೇಳುವಂತೆ ಸಮ್ಮಿಶ್ರ ಸರ್ಕಾರ ಶೀಘ್ರವೇ ಪತನವಾಗುತ್ತೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ‘ ಅವರೇನು ಭವಿಷ್ಯ ಹೇಳುತ್ತಾರ..? ‘ ಎಂದು ಕೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com