ಜಿಲ್ಲಾ ಪಂಚಾಯಿತಿ ಸದಸ್ಯೆಗೆ ರೌಡಿಗಳಿಂದ ಬೆದರಿಕೆ : ಸಾಮಾನ್ಯ ಸಭೆಯಲ್ಲಿ ಕಣ್ಣೀರಿಟ್ಟ ಸುನಂದಮ್ಮ

ಮಂಡ್ಯ :  ಜಿಲ್ಲಾ ಪಂಚಾಯಿತಿ ಸದಸ್ಯೆ ಗೆ ರೌಡಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಜಿಲ್ಲಾ  ಪಂಚಾಯಿತ್​ ಸಾಮಾನ್ಯ ಸಭೆಯಲ್ಲಿ ಮಹಿಳಾ ಸದಸ್ಯೆಯೊಬ್ಬರು ಕಣ್ಣೀರು ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ಮಾರಗೌಡನಹಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಂದಮ್ಮನವರು ನಾಗಮಂಗಲ ತಾಲೂಕಿನ ಸಾರ್ವಜನಿಕ ವಿದ್ಯಾರ್ಥಿ ನಿಲಯಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ, ನಿರ್ವಹಣೆಯು ಸರಿಯಿಲ್ಲ ಎಂಬ ಬಗ್ಗೆ ನಿಲಯ ಮೇಲ್ವಿಚಾರಕರನ್ನು ವಿಚಾರಿಸಿದರೆ, ರೌಡಿಗಳಿಂದ ಬೆದರಿಕೆ ಹಾಕಿಸುತ್ತಾರೆ ಎಂದು ಸಭೆಯಲ್ಲಿ ಕಣ್ಣೀರು ಹಾಕಿ ತಮ್ಮ ಅಳಲು ತೊಡಿಕೊಂಡಿದ್ದಾರೆ.

ಈ ವಿಷಯಕ್ಕೆ ಸಂಬಂಧಪಟ್ಟ ಮೇಲಿನ ಅಧಿಕಾರಿಗಳಿಗೆ ದೂರು ನೀಡಿದರೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಅಧಿಕಾರಿಗಳು ಕೂಡ ಪಾಲ್ಗೊಂಡಿರುವ ಅನುಮಾನವಿದೆ ಎಂದು  ಜಿಲ್ಲಾ ಪಂಚಾಯಿತಿ ಸದಸ್ಯೆ  ದೂರಿದರು. ವಿದ್ಯಾರ್ಥಿನಿಲಯಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ತಮಗೆ ಬೆದರಿಕೆ ಹಾಕಿಸಿರುವ ಮೇಲ್ವಿಚಾರಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಣ್ಣೀರು ಹಾಕುತ್ತಲೇ ಸದಸ್ಯೆ ಸುನಂದಮ್ಮ  ಒತ್ತಾಯ ಮಾಡಿದ್ರು.

Leave a Reply

Your email address will not be published.

Social Media Auto Publish Powered By : XYZScripts.com