ಗೌರಿ ಲಂಕೇಶ್ ಹತ್ಯೆಗೆ 1 ವರ್ಷ ಹಿನ್ನೆಲೆ : ‘ಗೌರಿ ದಿನ’ ಆಚರಣೆ – ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ನಿನ್ನೆಗೆ ಸೆಪ್ಟೆಂಬರ್ 5 ರಂದು ಒಂದು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ಬಳಗ ಹಾಗೂ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ರಾಜಧಾನಿ ಬೆಂಗಳೂರಿನಲ್ಲಿ ‘ ಗೌರಿ ದಿನ ‘ ವನ್ನು ಆಚರಿಸಲಾಯಿತು. ಅಬಿವ್ಯಕ್ತಿ ಹತ್ಯೆ ವಿರೋಧಿ ಸಪ್ತಾಹದ ಅಂಗವಾಗಿ ರಾಜಭವನ ಚಲೋ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಹಿರಿಯ ರಾಜಕಾರಣಿ ಎ.ಕೆ ಸುಬ್ಬಯ್ಯ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ, ರಂಗಕರ್ಮಿ ಹೆಗ್ಗೋಡು ಪ್ರಸನ್ನ, ಸಾಹಿತಿ ಚಂದ್ರಶೇಖರ ಪಾಟೀಲ್, ನಟ ಪ್ರಕಾಶ ರೈ, ಸ್ವಾಮಿ ಅಗ್ನಿವೇಶ್, ಲೇಖಕಿ ಎಮ್.ಎಸ್ ಆಶಾದೇವಿ, ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಪತ್ರಕರ್ತೆ ತೀಸ್ತಾ ಸೆಟಲ್ವಾಡ್, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್, ಉಮರ್ ಖಾಲಿದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಗತಿಪರರು, ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯೆಂದು ಘೋಷಿಸಲು ಒತ್ತಾಯಿಸಲಾಯಿತು.

Leave a Reply

Your email address will not be published.

Social Media Auto Publish Powered By : XYZScripts.com