ರಾಜ್ಯ ಸರ್ಕಾರದ ವಿರುದ್ಧ ವಿಕಾಸಸೌಧದ ಬಳಿ ಬಿಜೆಪಿ ಶಾಸಕರ ಧರಣಿ ಸತ್ಯಾಗ್ರಹ…!

ಬೆಂಗಳೂರು : ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು  ಬಿಜೆಪಿ ಶಾಸಕರು ವಿಕಾಸಸೌಧದ ಬಳಿಯ ಗಾಂಧಿ ಪ್ರತಿಮೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ವಕ್ಫ್ ಆಸ್ತಿ ಕಬಳಿಕೆ  ಕುರಿತು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿರುವ ಅನ್ವರ್ ಮಾಣಿಪ್ಪಾಡಿ ವರದಿಯನ್ನು ರಾಜ್ಯ ವಿಧಾನಮಂಡಲದಲ್ಲಿ ಮಂಡಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಇಂದು ವಿಕಾಸಸೌಧದ ಬಳಿಯ ಗಾಂಧೀ ಪ್ರತಿಮೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸಿದ್ರು.

ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ,ಮಾಜಿ ಉಪಮುಖ್ಯಮಂತ್ರಿ ಶ್ರೀ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿ, ಶಾಸಕರಾದ ಶ್ರೀ ನಾರಾಯಣ ಸ್ವಾಮಿ,ರಾಜ್ಯ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ತೇಜಸ್ವಿನಿ ಗೌಡ, ಅಲ್ಪಸಂಖ್ಯಾತ ಆಯೋಗದ ಮಾಜೀ ಅಧ್ಯಕ್ಷರಾದ ಶ್ರೀ ಅನ್ವರ್ ಮಾಣಿಪ್ಪಾಡಿ ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಶಾಸಕರು ಧರಣಿಯಲ್ಲಿ  ಭಾಗಿಯಾಗಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com