ಮೈಸೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು..

ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ಮನೆಗೆ ನುಗ್ಗಿದ್ದು, ಮನೆಯ ಮುಂಭಾಗ ಸಂಪೂರ್ಣ ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಅವಘಡ ನಡೆದಿದ್ದು, ಇನೋವಾ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದವರಿಗೆ ಸಣ್ಣ ಪುಟ್ಟ ಗಾಯ, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಡಿಕೇರಿಯಿಂದ ಮೈಸೂರಿಗೆ ಇನೋವಾ ಕಾರು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದ ಪರಿಣಾಮ ಈ ಅವಘಡ ಸಂಭವಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com