ಕಲಬುರ್ಗಿ : ವಸತಿ ಶಾಲೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ…!

ಕಲಬುರ್ಗಿ : ವಿಷ ಆಹಾರ ಸೇವನೆಯಿಂದ ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.

ಕಳೆದ ರಾತ್ರಿ ಆಹಾರ ಸೇವಿಸಿ ಮಲಗಿದ ನಂತರ ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣ  ಕಡಗಂಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಿದ್ಯಾರ್ಥಿನಿಯರನ್ನು ದಾಖಲು ಮಾಡಲಾಗಿದೆ. ಕೆಲ ವಿದ್ಯಾರ್ಥಿನಿಯರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರೆ, ನಾಲ್ವರು ವಿದ್ಯಾರ್ಥಿನಿಯರಿಗೆ ವಾಂತಿಯಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ವಸತಿ ನಿಲಯದಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಹುಳ ಬಿದ್ದ ಆಹಾರ ನೀಡುವುದು, ಸ್ವಚ್ಛತೆ ಕಾಪಾಡದೇ ಇರುವುದರಿಂದಾಗಿ ಆಹಾರ ಸೇವಿಸಿದ ವಿದ್ಯಾರ್ಥಿನಿಯರಲ್ಲಿ ಆಗಾಗ ಹೊಟ್ಟೆ ನೋವು ಬರುವುದು ಸಾಮಾನ್ಯ ಎಂದು ಆರೋಪಿಸಲಾಗಿದೆ. ಗುಣಮಟ್ಟದ ಆಹಾರ ನೀಡಬೇಕೆಂದು ವಿದ್ಯಾರ್ಥಿಗಳು  ಆಗ್ರಹಿಸಿದ್ದಾರೆ.

Leave a Reply

Your email address will not be published.