ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ : ಅಪಾರ ಮೌಲ್ಯದ ವಸ್ತು ಬೆಂಕಿಗಾಹುತಿ…!

ಮೈಸೂರು : ಬಟ್ಟೆ ಅಂಗಡಿಗೆ ಬೆಂಕಿ ಬಿದ್ದು ಸುಮಾರು 20 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಬೆಟ್ಟದಪುರದಲ್ಲಿದ್ದ ನಾಕೋಡ ಎಂಬಲ್ಲಿ ಇದ್ದ ಅಂಗಡಿ ರಾಜಸ್ಥಾನ ಮೂಲದ ರಮೇಶ್ ಎಂಬವರಿಗೆ ಸೇರಿದ್ದು. ವಿದ್ಯುತ್ ಅವಘಡದಿಂದ ಬೆಳಿಗ್ಗಿನ ಜಾವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಒಂದು ಗಂಟೆ ಕಾಲ ಬೆಂಕಿ ಹೊತ್ತಿ ಉರಿದಿದೆ.

fire-clothes-shop-burned-rs-20-lakh-worth-mysore

ಇನ್ನು ಈ ಅವಘಡದಿಂದ 20 ಲಕ್ಷ ಮೌಲ್ಯದ ಬಟ್ಟೆ ಸುಟ್ಟು ಕರಕಲಾಗಿದ್ದು, ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯುಂಟಾಗಿದೆ.ಇನ್ನು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ‌ನಂದಿಸಲು ಹರಸಾಹಸಪಟ್ಟರು, ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಸಾಥ್ ನೀಡಿ ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com