ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ವಿರೋಧ : ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ..!

ದೊಡ್ಡಬಳ್ಳಾಪುರ : ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳಕ್ಕೆ ವಿರೋಧಿಸಿ ಜಯ ಕರ್ನಾಟಕ ಸಂಘಟನೆಯವರು ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪದೇ ಪದೇ ಹೆಚ್ಚುತ್ತಿರುವ ತೈಲ ಬೆಲೆಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದವರು ತೈಲ ಬೆಲೆ ಹೆಚ್ಚಳ ಮಾಡಿರುವುದರಿಂದ ಸಾಮಾನ್ಯ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ಈ ಬೆಲೆ ಏರಿಕೆಯಿಂದ ತೊಂದರೆಯಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಒದಗಿಸಿ ಎಂದು ಕಾರ್ಯಕರ್ತರು ಸರ್ಕಾರಕ್ಕೆ ಹಾಗೂ ತಹಶಿಲ್ದಾರ್​ಗೆ ಮನವಿ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com