ಚಿಕ್ಕಮಗಳೂರು : ಕಡೂರಿನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ – ಗ್ರಾಮಸ್ಥರಿಂದ ಪ್ರತಿಭಟನೆ

ಚಿಕ್ಕಮಗಳೂರು : ಚಿಕ್ಕಮಗಳೂರಿನ ಕಡೂರಿನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಕುಡಿಯುವ ನೀರಿಗೆ ಆಗ್ರಹಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಸ್ಥಳಕ್ಕೆ ಬಂದ‌ ತಹಶೀಲ್ದಾರ್ ಜೀಪಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಅಡ್ಡಲಾಗಿ ಕುಳಿತು ತಹಿಶೀಲ್ದಾರ್ ಜೀಪಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.

ಕಡೂರು ತಹಶಿಲ್ದಾರ್ ಭಾಗ್ಯರವರ ಜೀಪು ಅಡ್ಡಲಾಗಿ ಕುಳಿತ ಗ್ರಾಮಸ್ಥರು, ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಸ್ಥಳಕ್ಕೆ ಬರುವಂತೆ ಆಗ್ರಹಿಸಿದ್ದಾರೆ. ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.

ನಿನ್ನೆಯಿಂದ ಪ್ರತಿಭಟನೆ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ನೀರು ಕೊಡುವಂತೆ ಮನವಿಮಾಡಿದ್ದರೂ, ನೀರು ನೀಡದ ಹಿನ್ನಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

Leave a Reply

Your email address will not be published.