ದಾವಣಗೆರೆ : ಡಿವೈಡರ್ ಗೆ ಕಾರ್ ಡಿಕ್ಕಿ – ಬೆಂಗಳೂರು ಮೂಲದ ನಾಲ್ವರು ಯುವಕರ ದುರ್ಮರಣ

ದಾವಣಗೆರೆ : ಡಿವೈಡರ್ ಗೆ ಕಾರ್ ಡಿಕ್ಕಿಯಾದ ಪರಿಣಾಮ ನಾಲ್ವರು ಯುವಕರ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ವಿನಯ್ (27), ಅಜಯ್ (32) ವಿನಯ್ (30) ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಸಿದ್ದಪ್ಪ (28) ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕೆಎ 42 ಎಂ 9491ಕ್ರಿಯೇಟ್ ಕಾರ್ ಡಿವೈಡರ್ ಗೆ ಡಿಕ್ಕಿಯಾಗಿದೆ. ಹೀಗೆ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ.

ಬೆಂಗಳೂರಿನ ಚಾಮರಾಜಪೇಟೆಯ ಡಿಟಿಡಿಸಿ ಕೋರಿಯರ್ ಉದ್ಯೋಗಿಗಳಾಗಿದ್ದ ಇವರು ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದರು. ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.