ಸಿಲಿಂಡರ್​ ಸ್ಫೋಟ : ಮನೆಗಳು ಸಂಪೂರ್ಣ ಭಸ್ಮ, ಐದು ಕುಟುಂಬಗಳು ಬೀದಿಪಾಲು…!

ಚಿಕ್ಕಬಳ್ಳಾಪುರ : ಸಿಲಿಂಡರ್ ಸ್ಫೋಟಗೊಂಡು ಐದು ಮನೆಗಳು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಮಣಿವಾಲ್​ ಗ್ರಾಮದ ಆನಂದಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಮನೆತುಂಬಾ ಗ್ಯಾಸ್​ ಆವರಿಸಿದಕೊಂಡು ಬೆಂಕಿ ಹತ್ತಿಕೊಂಡಿದೆ. ಐದು ಮನೆಗಳಿಗೆ ಆವರಿಸಿದ ಬೆಂಕಿಯ ಕೆನ್ನಾಲಿಗೆ, ಮನೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಒಂದು ಮನೆ ಮಂದಿ ಮಾಡಿದ ತಪ್ಪಿಗೆ 5 ಕುಂಟುಂಬಗಳು  ಬೀದಿ ಪಾಲಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ಶಮನ ಮಾಡಿದ್ರು. ಈ ಘಟನೆಗೆ ಸಂಬಂಧ ಪಟ್ಟಂತೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.

Leave a Reply

Your email address will not be published.