ಇನ್ನೆರೆಡು ದಿನ ನೋಡಿ, ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ : ಈಶ್ವರಪ್ಪ ಬಾಂಬ್

ಇನ್ನ ಎರಡು ದಿನ ಕಾದು ನೋಡಿ ರಾಜ್ಯ ರಾಜಕಾರಣದಲ್ಲಿ ಹೇಗೆ ಬದಲಾವಣೆ ಆಗುತ್ತೆ ಅಂತಾ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಇನ್ನು ಎರಡು ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದ್ರೂ ಆಗಬಹುದು. ಸಚಿವ ಡಿಕೆ ಶಿವಕುಮಾರ್ ಅರೆಸ್ಟ್ ಆಗಬಹುದು, ಅಥವಾ ಸಮ್ಮಿಶ್ರ ಸರ್ಕಾರ ಬಿದ್ದು ಹೋಗಬಹುದು ಕಾದು ನೋಡಿ ಎಂದಿದ್ದಾರೆ.

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್ ನವರೇ ಕಿತ್ತಾಡಿಕೊಂಡು ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಎಂದು ಕೆಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com