Shocking : ವಾರದಲ್ಲಿ KSRTC & AMP : BMTC ದರ ಏರಿಕೆ…!

ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ದರ ಮುಂದಿನ ವಾರದಿಂದ ಹೆಚ್ಚಳವಾಗಲಿದೆ. ಡೀಸೆಲ್ ಬೆಲೆ ಏರಿಕೆ ಹಿನ್ನಲೆಯಲ್ಲಿ ಬಸ್ ದರ ಏರಿಕೆಗೆ ಸಾರಿಗೆ ಸಂಸ್ಥೆಗಳು ಮನವಿ ಮಾಡಿದ್ದವು. ಮಂಡ್ಯದ ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಈ ಕುರಿತು ಮಾಹಿತಿ ನೀಡಿದರು. ‘ಮುಂದಿನ ವಾರದಿಂದ ಬಸ್‌ ದರ ಏರಿಕೆಯಾಗಲಿದೆ. ಶೇ 18ರಷ್ಟು ದರ ಏರಿಕೆಯಾಗಲಿದೆ’ ಎಂದರು.

ಸಂಬಂಧಿತ ಚಿತ್ರ

ಇಂಧನಗಳ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಭಾನುವಾರ ಡೀಸೆಲ್ ದರ 74.95 ರೂ.ಗಳು. ನಿರಂತರವಾಗಿ ದರಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗುತ್ತಿದೆ. ಜೂನ್ ತಿಂಗಳಿನಲ್ಲಿಯೇ ಕೆಎಸ್ಆರ್‌ಟಿಸಿ ಶೇ 18 ರಷ್ಟು, ಬಿಎಂಟಿಸಿ ಶೇ 20 ರಷ್ಟು ಪ್ರಯಾಣದರ ಏರಿಕೆ ಮಾಡಲು ಒಪ್ಪಿಗೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದವು. ಆದರೆ, ಈ ಪ್ರಸ್ತಾವನೆಗೆ ತಕ್ಷಣ ಒಪ್ಪಿಗೆ ಸಿಕ್ಕಿರಲಿಲ್ಲ. ಡೀಸೆಲ್ ದರ ಏರಿಕೆಯಿಂದಾಗಿ ಮೂರು ತಿಂಗಳಿನಲ್ಲಿ ಕೆಎಸ್ಆರ್‌ಟಿಸಿಗೆ ಸುಮಾರು 180 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈಗ ಇಂಧನ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಆದ್ದರಿಂದ, ಸರ್ಕಾರ ಪ್ರಯಾಣದರ ಏರಿಕೆಗೆ ಒಪ್ಪಿಗೆ ನೀಡಿದೆ.

Leave a Reply

Your email address will not be published.

Social Media Auto Publish Powered By : XYZScripts.com