ಮೋದಿಗೆ HDK ಟಕ್ಕರ : ರಾಜ್ಯದಲ್ಲಿ ಕಡಿಮೆಯಾಗಲಿದೆ ಪೆಟ್ರೋಲ್ ದರ…

ವಾಹನ ಸವಾರರಿಗೆ ಸಿಹಿಸುದ್ದಿ ನೀಡಲು ಮುಂದಾಗಿದಗದಾರೆ CM ಸಿಎಂ ಹೆಚ್.ಡಿ ಕುಮಾರಸ್ವಾಮಿ…..ದೇಶದ ಜನರಿಗೆ ತೈಲಬೆಲೆ ಏರಿಕೆ ಶಾಕ್ ನೀಡಿರುವ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ. ಈ ಮಧ್ಯೆ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಡಿಯಾಗಿದ್ದಾರೆ.


ಹೌದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮೇಲಿನ ಸೆಸ್ ಕಡಿಮೆ ಮಾಡುವ ಚಿಂತನೆ ಇದೆ ಈ ಬಗ್ಗೆ ನಮ್ಮ ಆರ್ಥಿಕ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿಕೊಂಡರೇ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ. ಕೇಂದ್ರದ ತೈಲನೀತಿ ಬದಲಾವಣೆಯಿಂದ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com