ಜೈಲಿನಲ್ಲಿ ಖಿನ್ನತೆಯಿಂದ ಬಳಲುತ್ತಿರುವ ಲಾಲೂ ಯಾದವ್.. : RIMS ವೈದ್ಯಕೀಯ ವರದಿ

ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಜೈಲಿನಲ್ಲಿ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು RIMS (ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಕಾಲೇಜ್) ನಿರ್ದೇಶಕರಾಗಿರುವ ಆರ್.ಕೆ ಶ್ರೀವಾಸ್ತವ ಸೋಮವಾರ ತಿಳಿಸಿದ್ದಾರೆ.

ಜೈಲಿನಲ್ಲಿ ಲಾಲೂ ಪ್ರಸಾದ್ ಯಾದವ್ ಅವರ ತಪಾಸಣೆ ನಡೆಸುತ್ತಿರುವ ವೈದ್ಯರು ತಾವು ನೀಡಿರುವ ವೈದ್ಯಕೀಯ ವರದಿಯಲ್ಲಿ ಲಾಲೂ ಖಿನ್ನತೆಯಿಂದ ಬಳಲುತ್ತಿರುವ ವಿಷಯವನ್ನು ತಿಳಿಸಿದ್ದಾರೆ.

‘ ಏಮ್ಸ್ ಆಸ್ಪತ್ರೆಯಿಂದ ಲಾಲೂ ಪ್ರಸಾದ್ ಯಾದವ್ ಅವರ ಡಿಸ್ಚಾರ್ಜ್ ಸ್ಲಿಪ್ ಕೂಡ ಈ ವಿಷಯವನ್ನು ಧೃಡಪಡಿಸುತ್ತದೆ. ಖಿನ್ನತೆಗೆ ಲಾಲೂ ಮನೋವೈದ್ಯರಿಂದ ಚಿಕಿತ್ಸೆ ಪಡೆಯಲಿದ್ದಾರೆಯೇ ಎಂಬುದರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ ‘ ಎಂದು ಶ್ರೀವಾಸ್ತವ ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com