ಮೆಕ್‍ಗ್ರಾ ಹಿಂದಿಕ್ಕಿದ ಆ್ಯಂಡರ್ಸನ್ : ಟೆಸ್ಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವೇಗಿ ಎಂಬ ಹೆಗ್ಗಳಿಕೆ

ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತದ ವಿರುದ್ಧ ಲಂಡನ್ನಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದ 5ನೇ ದಿನದಾಟದಲ್ಲಿ ಆ್ಯಂಡರ್ಸನ್ ಈ ಸಾಧನೆ ಮಾಡಿದ್ದಾರೆ.

ಟೀಮ್ ಇಂಡಿಯಾ  ಮೊಹಮ್ಮದ್ ಶಮಿಯನ್ನು ಬೋಲ್ಡ್ ಮಾಡುವ ಮೂಲಕ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ 564ನೇ ವಿಕೆಟ್ ಪಡೆದರು. ಈ ಮೂಲಕ ಜೇಮ್ಸ್ ಆ್ಯಂಡರ್ಸನ್ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಗ್ಲೆನ್ ಮೆಕ್ ಗ್ರಾ ಅವರನ್ನು ಹಿಂದಿಕ್ಕಿದ್ದಾರೆ.

ಲೈನ್ ಮತ್ತು ಲೆಂಗ್ತ್ ಗೆ ಹೆಸರುವಾಸಿಯಾಗಿದ್ದ ಆಸ್ಟ್ರೇಲಿಯಾದ ದಿಗ್ಗಜ ಬೌಲರ್ ಗ್ಲೆನ್ ಮೆಕ್ ಗ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 563 ವಿಕೆಟ್ ಗಳನ್ನು ಪಡೆದಿದ್ದಾರೆ.

One thought on “ಮೆಕ್‍ಗ್ರಾ ಹಿಂದಿಕ್ಕಿದ ಆ್ಯಂಡರ್ಸನ್ : ಟೆಸ್ಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವೇಗಿ ಎಂಬ ಹೆಗ್ಗಳಿಕೆ

Leave a Reply

Your email address will not be published.

Social Media Auto Publish Powered By : XYZScripts.com